Tag «Rayaru»

ಶ್ರೀರಾಘವೇಂದ್ರವಿಜಯ ಉಲ್ಲೇಖಿಸುವ ಶ್ರೀರಾಘವೇಂದ್ರತೀರ್ಥರ ಪಟ್ಟಾಭಿಷೇಕ.

ಶ್ರೀರಾಘವೇಂದ್ರವಿಜಯ ಉಲ್ಲೇಖಿಸುವ ಶ್ರೀರಾಘವೇಂದ್ರತೀರ್ಥರ ಪಟ್ಟಾಭಿಷೇಕ. ವೇದಾಂತೇತಿಹಾಸದಲ್ಲಿ ಶ್ರೀರಾಘವೇಂದ್ರಗುರುಸಾರ್ವಭೌಮರ ಸ್ಥಾನದ ಪರಿಚಯವನ್ನು ಪ್ರಯಾಸದಿಂದ ತಿಳಿಯುವ ಅಗತ್ಯ ಸರ್ವಥಾ ಇಲ್ಲ, ಕಾರಣ ಅದು ಸರ್ವಜನನಿತವಾದ ವಿಷಯ. ಶ್ರೀಪದ್ಮನಾಭತೀರ್ಥರು, ಶ್ರೀಮಟ್ಟೀಕಾಕೃತ್ಪಾದರು, ಶ್ರೀವಿಬುಧೇಂದ್ರರು-ಶ್ರೀಜಿತಾಮಿತ್ರರು, ಶ್ರೀಸುರೇಂದ್ರರು, ಶ್ರೀವಿಜಯೀಂದ್ರರು, ಶ್ರೀಸುಧೀಂದ್ರ-ಶ್ರೀರಾಘವೇಂದ್ರರು, ಶ್ರೀಸುಮತೀಂದ್ರ-ಶ್ರೀವಾದೀಂದ್ರರು, ಶ್ರೀವಸುಧೇಂದ್ರ-ಶ್ರೀವರದೇಂದ್ರ-ಶ್ರೀಧೀರೇಂದ್ರರು ಹೀಗೆ ಮಹೋನ್ನತ ಯತಿಪರಂಪರೆಯ ಆ ವಿದ್ಯಾಪ್ರಭಾವ, ಗ್ರಂಥನಿರ್ಮಾಣ, ವಾದಿ-ದಿಗ್ವಿಜಯಗಳು ಮಾತ್ರವಲ್ಲದೇ ಅವರು ಸಮಾಜದ ಕೊನೆಯ ವ್ಯಕ್ತಿಯ ಮೇಲೂ ಮಾಡಿದ ಪರಮಾನುಗ್ರಹ ಪ್ರತ್ಯಕ್ಷಸಿದ್ಧ. ಹೀಗೆ ಶ್ರೀಮನ್ಮಧ್ವಾಚಾರ್ಯರಿಂದ ಪ್ರವಹಿಸಿದ ವಿಶಿಷ್ಟವಾದ ಪರಂಪರೆಯಲ್ಲಿ ಉದಯಿಸಿದ ಒಬ್ಬೊಬ್ಬ ಯತಿಗಳೂ ಕೂಡ ಶ್ರೀಮೂಲರಾಮನಿಗರ್ಪಿಸಿದ ನಕ್ಷತ್ರಮಾಲೆಯ ಹೊಳೆಯುವ ನಕ್ಷತ್ರಗಳು. ಅಂತಹ …